Web Analytics Made Easy - Statcounter
Privacy Policy Cookie Policy Terms and Conditions ಆಲೂರು ವೆಂಕಟರಾಯರು - Wikipedia

ಆಲೂರು ವೆಂಕಟರಾಯರು

From Wikipedia

ಆಲೂರು ವೆಂಕಟರಾಯರು ಕನ್ನಡ ಸಾಹಿತ್ಯಲೋಕದ ಪ್ರಮುಖರೊಲ್ಲಬ್ಬರು.

ಆಲೂರು ವೆಂಕಟರಾಯರು ೧೮೮೦ ,ಜುಲೈ ೧೨ರಂದು ಬಿಜಾಪುರದಲ್ಲಿ ಜನಿಸಿದರು. ತಂದೆ ಭೀಮರಾಯರು, ತಾಯಿ ಭಾಗೀರಥಮ್ಮ. ಧಾರವಾಡದಲ್ಲಿ ಆರಂಭದ ಶಿಕ್ಷಣ ಮುಗಿಸಿದ ವೆಂಕಟರಾಯರು ಪುಣೆಯ ಫರ್ಗ್ಯೂಸನ್ ಕಾಲೇಜಿನಿಂದ ೧೯೦೩ರಲ್ಲಿ ಬಿ.ಏ. ಪದವಿ ಪಡೆದರು. ೧೯೦೫ರಲ್ಲಿ ಮುಂಬಯಿಯಲ್ಲಿ ಎಲ್.ಎಲ್.ಬಿ. ಪದವಿಯನ್ನು ಗಳಿಸಿ, ಧಾರವಾಡಕ್ಕೆ ಮರಳಿದರು. ಆ ಕಾಲದಲ್ಲಿ ಮುಂಬಯಿ ಪ್ರಾಂತದಲ್ಲಿದ್ದ ಕನ್ನಡ ಪ್ರದೇಶಗಳಲ್ಲಿ ಮರಾಠಿಯದೆ ಪ್ರಾಬಲ್ಯ. ಕನ್ನಡಿಗರನ್ನು ಜಾಗೃತಗೊಳಿಸಲು ವೆಂಕಟರಾಯರು ೧೯೦೬ರಲ್ಲಿ ವಾಗ್ಭೂಷಣ ಎಂಬ ಪತ್ರಿಕೆ ಆರಂಭಿಸಿದರು. ವಕೀಲಿ ವೃತ್ತಿಯನ್ನು ತೊರೆದು ಸ್ವದೇಶಿ ಚಳುವಳಿಯಲ್ಲಿ ಭಾಗವಹಿಸಿದರು. ೧೯೨೨ ನವೆಂಬರ್ ೪ರಂದು ಜಯಕರ್ನಾಟಕ ಪತ್ರಿಕೆಯನ್ನು ಪ್ರಾರಂಭಿಸಿದರು. ಈ ಪತ್ರಿಕೆ ಆರು ವರ್ಷಗಳವರೆಗೆ ನಡೆಯಿತು. ಈ ಪತ್ರಿಕೆಗೆ ಬೆಟಗೇರಿ ಕೃಷ್ಣಶರ್ಮ, ದ.ರಾ.ಬೇಂದ್ರೆ ಮೊದಲಾದ ಶ್ರೇಷ್ಠ ಸಾಹಿತಿಗಳು ಸಹಸಂಸ್ಥಾಪಕ ಸಂಪಾದಕರಾಗಿ ಕೆಲಸ ಮಾಡಿದ್ದಾರೆ. ಇದರಂತೆಯೆ ಕನ್ನಡಿಗ, ಕರ್ಮವೀರ ಮೊದಲಾದ ಪತ್ರಿಕೆಗಳ ಸಂಪಾದಕತ್ವವನ್ನು ಸಹ ವಹಿಸಿಕೊಂಡಿದ್ದರು.

ಆಲೂರು ವೆಂಕಟರಾಯರು ಆ ಕಾಲದ ಸಾಮಾಜಿಕ ಚಟುವಟಿಕೆಗಳ ಮುಂಚೂಣಿಯಲ್ಲಿದ್ದರು. ೧೯೨೧ರಲ್ಲಿ ಮಹಾತ್ಮ ಗಾಂಧಿಯವರು ಆರಂಭಿಸಿದ ಸತ್ಯಾಗ್ರಹ ಚಳುವಳಿಯಲ್ಲಿ ಭಾಗವಹಿಸಿದ್ದರು. ಕರ್ನಾಟಕದ ಏಕೀಕರಣ, ಕರ್ನಾಟಕ ಇತಿಹಾಸ ಮಂಡಲದ ಸ್ಥಾಪನೆ, ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪನೆ, ಕರ್ನಾಟಕ ವಿಶ್ವವಿದ್ಯಾನಿಲಯದ ಕಲ್ಪನೆ, ವಿಜಯನಗರ ಮಹೋತ್ಸವ, ನಾಡಹಬ್ಬದ ಯೋಜನೆ, ಕರ್ನಾಟಕ ವಿದ್ಯಾವರ್ಧಕ ಸಂಘ(ಧಾರವಾಡ), ಈ ಎಲ್ಲಾ ಯೋಜನೆಗಳಲ್ಲಿ ಆಲೂರು ವೆಂಕಟರಾಯರು ಮಹತ್ವದ ಪಾತ್ರ ವಹಿಸಿದ್ದಾರೆ. ೧೯೦೭ರಲ್ಲಿಯೆ ಕನ್ನಡ ಗ್ರಂಥಕರ್ತರ ಸಮ್ಮೇಳನವನ್ನು ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಪ್ರಕಾಶಕರಿಗೆ ಅನುಕೂಲವಾಗಲು ಕರ್ನಾಟಕ ಗ್ರಂಥ ಮಂಡಳಿಯನ್ನು ಸ್ಥಾಪಿಸಿದ್ದರು.

[ಬದಲಾಯಿಸಿ] ಉದ್ಯಮಶೀಲತೆ

[೧]

ಆಲೂರರ ಉದ್ಯಶೀಲತೆ ಅಸಾಧಾರಣವಾದದ್ದು. ತಾವು ಸ್ಥಾಪಿಸಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯಲ್ಲಿ ವೃತ್ತಿಪರ ತರಬೇತಿ ನೀಡುವ ಉದ್ದೇಶದಿಂದ ಬೆಂಕಿಪೆಟ್ಟಿಗೆ ಕಾರಖಾನೆ, ಪೆನ್ಸಿಲ್ ಕಾರಖಾನೆ, ಉಡುಗೆ ಫ್ಯಾಕ್ಟರಿ, ಡ್ರಾಯಿಂಗ್ ಪೆಯಿಂಟಿಂಗ್ ಕ್ಲಾಸು, ಮತ್ತು ಪ್ರಿಂಟಿಂಗ್ ಕ್ಲಾಸುಗಳನ್ನೂ ಪ್ರಾರಂಭಿಸಿದರು. ಆಗಿನ ಬ್ರಿಟಿಷ್ ಆಳ್ವಿಕೆಯ ಹತ್ತಿಕ್ಕುವ ನೀತಿಯಿಂದಾಗಿ ಈ ಸಂಸ್ಥೆಯನ್ನು ಮುಚ್ಚಬೇಕಾಗಿ ಬಂತು.

ನಂತರ ಸಕ್ಕರೆ ಕಾರಖಾನೆ, ಬೆಳಗಾವಿಯ ಹತ್ತಿರ ಖಾನಾಪುರದಲ್ಲಿ ಹಂಚಿನ ಕಾರಖಾನೆ,ಹೊಳೆ ಆಲೂರಿನಲ್ಲಿ ಹತ್ತಿಯ ಮಿಲ್ಲು, ಹೀಗೆ ಒಂದಾದಮೇಲೊಂದು ಉದ್ಯಮಗಳನ್ನು ಹುಟ್ಟುಹಾಕಿದರು. ನಂತರ ಮಿತ್ರರೊಂದಿಗೆ ಅಗ್ರಿಕಲ್ಚರಲ್ ಸೊಸೈಟಿ ತೆರೆದರು. ನಂತರ ಬಟ್ಟೆ ಅಂಗಡಿ ತೆರೆದರು. ತದನಂತರ ಮ್ಯೂಚುವಲ್ ಹೆಲ್ಪ್ ಫಂಡ್ ತೆರೆದರು. ದುರದೃಷ್ಟವಶಾತ್ ಇವು ಯಾವುದೂ ಯಶಸ್ವಿಯಾಗಲಿಲ್ಲ.

ಈ ಪ್ರಯತ್ನಗಳಲ್ಲಿ ಬರಿಯ ಲಾಭ ಮಾಡಿಕೊಳ್ಳುವ ದೃಷ್ಟಿಯಿರದೆ, ಅವೆಲ್ಲವುಗಳಲ್ಲಿ ಒಂದು ವಿಶಿಷ್ಟ ರಾಷ್ಟ್ರೀಯ ಸೊಗಡಿದ್ದು, ಭಾರತದ ಔದ್ಯೋಗಿಕ ಪ್ರಗತಿಯ ಅಂಗವಾಗಿದ್ದವು.

[ಬದಲಾಯಿಸಿ] ಸಾಹಿತ್ಯ

ಆಲೂರು ವೆಂಕಟರಾಯರು ಸುಮಾರು ಇಪ್ಪತ್ತೈದು ಕೃತಿಗಳನ್ನು ಬರೆದಿದ್ದು ಕೆಲವು ಇಂತಿವೆ: ಶ್ರೀ ವಿದ್ಯಾರಣ್ಯ ಚರಿತ್ರೆ , ಕರ್ನಾಟಕ ಗತವೈಭವ, ಕರ್ನಾಟಕ ವೀರರತ್ನಗಳು, ಶಿಕ್ಷಣ ಮೀಮಾಂಸೆ, ರಾಷ್ಟ್ರೀಯತ್ವದ ಮೀಮಾಂಸೆ, ಕನ್ನಡಿಗರ ಭ್ರಮನಿರಸನ(ನಾಟಕ), ಕರ್ನಾಟಕತ್ವದ ವಿಕಾಸ, ಕರ್ನಾಟಕತ್ವದ ಸೂತ್ರಗಳು, ಸ್ವಾತಂತ್ರ್ಯಸಂಗ್ರಾಮ, ಗೀತಾಪ್ರಕಾಶ, ಗೀತಾಸಂದೇಶ, ಗೀತಾಪರಿಮಳ, ಗೀತಾಭಾವ ಪ್ರದೀಪ, ಶ್ರೀ ಮಧ್ವಾಚಾರ್ಯರ ಮೂಲ ಸಿದ್ಧಾಂತ, ಶ್ರೀ ಮಧ್ವಾಚಾರ್ಯರ ಪೂರ್ಣ ಬ್ರಹ್ಮವಾದ.

ತಮ್ಮ ಜೀವನದ ಅನುಭವಗಳನ್ನು ನನ್ನ ಜೀವನ ಸ್ಮೃತಿಗಳು ಎಂಬ ಹೆಸರಿನಲ್ಲಿ ಎರಡು ಭಾಗಗಳಲ್ಲಿ ಪ್ರಕಟಿಸಿದ್ದಾರೆ. ಲೋಕಮಾನ್ಯ ತಿಲಕರ ಗೀತಾ ರಹಸ್ಯವನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಆಲೂರು ವೆಂಕಟರಾಯರು ೧೯೩೦ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಕನ್ನಡದ ಜನತೆ ಇವರಿಗೆ ದೇಶಸೇವಾಧುರೀಣ , ಸ್ವಭಾಷಾರಕ್ಷಕ ಎಂದು ಕರೆದು ಸನ್ಮಾನಿಸಿದೆ. ಅಲ್ಲದೆ ಕರ್ನಾಟಕದ ಕುಲಪುರೋಹಿತ ಎಂದು ಗೌರವಿಸಿದೆ.

ಆಲೂರು ವೆಂಕಟರಾಯರು ೧೯೬೪ಫೆಬ್ರುವರಿ ೨೫ ರಂದು ನಿಧನ ಹೊಂದಿದರು.

[ಬದಲಾಯಿಸಿ] ಆಕರಗಳು

  1. ಕರ್ನಾಟಕ ಏಕೀಕರಣದ ನಾಲ್ವರು ಚಿಂತಕರು, ಮೂಲ:ಕೆ.ರಾಘವೇಂದ್ರ ರಾವ್, ಕನ್ನಡಕ್ಕೆ : ಆರ್ಯ, ಮನೋಹರ ಗ್ರಂಥ ಮಾಲಾ, ಧಾರವಾಡ ,2005 ಪುಟ 98-99

Static Wikipedia (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu -

Static Wikipedia 2007 (no images)

Static Wikipedia 2006 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu

Static Wikipedia February 2008 (no images)

aa - ab - af - ak - als - am - an - ang - ar - arc - as - ast - av - ay - az - ba - bar - bat_smg - bcl - be - be_x_old - bg - bh - bi - bm - bn - bo - bpy - br - bs - bug - bxr - ca - cbk_zam - cdo - ce - ceb - ch - cho - chr - chy - co - cr - crh - cs - csb - cu - cv - cy - da - de - diq - dsb - dv - dz - ee - el - eml - en - eo - es - et - eu - ext - fa - ff - fi - fiu_vro - fj - fo - fr - frp - fur - fy - ga - gan - gd - gl - glk - gn - got - gu - gv - ha - hak - haw - he - hi - hif - ho - hr - hsb - ht - hu - hy - hz - ia - id - ie - ig - ii - ik - ilo - io - is - it - iu - ja - jbo - jv - ka - kaa - kab - kg - ki - kj - kk - kl - km - kn - ko - kr - ks - ksh - ku - kv - kw - ky - la - lad - lb - lbe - lg - li - lij - lmo - ln - lo - lt - lv - map_bms - mdf - mg - mh - mi - mk - ml - mn - mo - mr - mt - mus - my - myv - mzn - na - nah - nap - nds - nds_nl - ne - new - ng - nl - nn - no - nov - nrm - nv - ny - oc - om - or - os - pa - pag - pam - pap - pdc - pi - pih - pl - pms - ps - pt - qu - quality - rm - rmy - rn - ro - roa_rup - roa_tara - ru - rw - sa - sah - sc - scn - sco - sd - se - sg - sh - si - simple - sk - sl - sm - sn - so - sr - srn - ss - st - stq - su - sv - sw - szl - ta - te - tet - tg - th - ti - tk - tl - tlh - tn - to - tpi - tr - ts - tt - tum - tw - ty - udm - ug - uk - ur - uz - ve - vec - vi - vls - vo - wa - war - wo - wuu - xal - xh - yi - yo - za - zea - zh - zh_classical - zh_min_nan - zh_yue - zu